ಮಹಾಶಿವರಾತ್ರಿ
ಮಾಘ ಕೃಷ್ಣ ಚತುರ್ದಶಿಯಂದು ಏಕಭುಕ್ತರಾಗಿರಬೇಕು (ಒಪ್ಪತ್ತು ಊಟ ಮಾಡುವುದು). ಚತುರ್ದಶಿಯಂದು ಬೆಳಗ್ಗೆ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು.