ಹಾಸನಾಂಬಾ ದೇವಿಯ ಜಾತ್ರ್ಯೋತ್ಸವ (ಜಾತ್ರ್ಯೋತ್ಸವ ಆರಂಭ ನವೆಂಬರ್ ೫)
ಸುಮಾರು ೧೨ ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರರಾದ ಶ್ರೀ. ಕೃಷ್ಣಪ್ಪ ನಾಯ್ಕರಿಗೆ ಕನಸಿನಲ್ಲಿ ದೇವಿಯು ನಾನು ಇಂತಹ ಜಾಗದಲ್ಲಿ ಹುತ್ತದ ರೂಪದಲ್ಲಿ ನೆಲೆಸಿದ್ದೇನೆ, ನನಗೊಂದು ಗುಡಿಯನ್ನು ಕಟ್ಟಿಸು ಎಂದು ಹೇಳಿ ಮಾಯವಾದಳು. ನಂತರ ಪಾಳೆಗಾರರಾದ ಶ್ರೀ. ಕೃಷ್ಣಪ್ಪ ನಾಯ್ಕರು ಹುತ್ತದ ರೂಪದಲ್ಲಿದ್ದ ದೇವಿಯ ಗುಡಿಯನ್ನು ಕಟ್ಟಿಸಿದರು, ಎಂದು ಇಲ್ಲಿನ ನಂಬಿಕೆಯಾಗಿದೆ.