ಮಂಡ್ಯದ ಅರ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ೩ ಅರ್ಚಕರನ್ನು ಹತ್ಯೆ ಮಾಡಿ ದರೋಡೆ
ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿ ದರೋಡೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ರಾತ್ರಿ ಸುಮಾರು ೧ ಗಂಟೆಯ ಸಮಯದಲ್ಲಿ ಮೂರುಜನರು ಮಲಗಿರುವಾಗ ಸಂಭವಿಸಿದೆ.