ಇಲ್ಲಿಯವರೆಗೆ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ೧೨೨ ಭಯೋತ್ಪಾದಕರನ್ನು ಬಂಧಿಸಲಾಗಿದೆ
ದಕ್ಷಿಣ ಭಾರತದ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಹಾಗೂ ತಮಿಳನಾಡು ರಾಜ್ಯಗಳಿಂದ ಇಸ್ಲಾಮಿಕ್ ಸ್ಟೇಟ್‌ನ ೧೨೨ ಭಯೋತ್ಪಾದಕರನ್ನು ೧೭ ಅಪರಾಧಗಳಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ ತನಿಖಾ ದಳದವರು (ಎನ್.ಐ.ಎ.ನಿಂದ) ಭಯೋತ್ಪಾದಕರನ್ನು ಬಂಧಿಸಿದ್ದಾರೆ, ಎಂದು ಕೇಂದ್ರ ಗೃಹ ಸಚಿವ ಜಿ. ಕಿಶನ್ ರೆಡ್ಡಿಯವರು ರಾಜ್ಯಸಭೆಯಲ್ಲಿ ಲಿಖಿತ ಮಾಹಿತಿ ನೀಡಿದ್ದಾರೆ.