ರಾಜ್ಯದಾದ್ಯಂತ ಚುರುಕಾದ ಮುಂಗಾರು: ನದಿಗಳ ಮಟ್ಟ ಏರಿಕೆ
ಶಿವಮೊಗ್ಗದ ಆಗುಂಬೆಯಲ್ಲಿ ಅತಿ ಹೆಚ್ಚು 9.8 ಸೆಂ.ಮೀ ಮಳೆ ದಾಖಲಾಗಿದೆ. ತುಂಗಾ ಜಲಾಶಯ ಭರ್ತಿಯಾಗಿರುವುದರಿಂದ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಪ್ರವಾಸಿ ತಾಣಗಳಲ್ಲಿ ನೀರಿಗೆ ಇಳಿಯುವುದನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದಾರೆ.