ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಇತರ ವಸ್ತುಗಳಿಂದ ತಯಾರಿಸಿದ ಮೂರ್ತಿಯು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ !
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್, ಕಾಗದ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶನ ಮೂರ್ತಿಯನ್ನು ತಯಾರಿಸಲಾಗು ತ್ತದೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಗಳ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿತವಾಗುವುದಿಲ್ಲ. ಕಲೆಯನ್ನು ಕೇವಲ ಕಲಾತ್ಮಕತೆಗಾಗಿ ಬಳಸುವುದರಿಂದ ಆ ಕಲಾಕೃತಿಯಲ್ಲಿ ದೈವೀ ಸ್ಪಂದನಗಳನ್ನು ಆಕರ್ಷಿಸುವ ಪ್ರಮಾಣ ಕಡಿಮೆಯಿರುತ್ತದೆ.