ಧರ್ಮದ ಅಧಿಕಾರವು ಬದುಕುವ ಅಧಿಕಾರಕ್ಕಿಂತ ದೊಡ್ಡದ್ದಲ್ಲ ! – ಮದ್ರಾಸ ಉಚ್ಚ ನ್ಯಾಯಾಲಯ
ಧಾರ್ಮಿಕ ವಿಧಿಗಳು ಸಾರ್ವಜನಿಕ ಹಿತಾಸಕ್ತಿ ಮತ್ತು ಮಾನವ ಜೀವನ ಹಕ್ಕಿಗೆ ಒಳಪಟ್ಟಿರಬೇಕು. ಬದುಕುವ ಹಕ್ಕಿಗಿಂತ ಧರ್ಮದ ಹಕ್ಕು ದೊಡ್ಡದಲ್ಲ. ಈ ಹಿನ್ನೆಲೆಯಲ್ಲಿ ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸರಕಾರವು ಕೆಲವು ಕ್ರಮಗಳನ್ನು ತೆಗೆದುಕೊಂಡರೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಮದ್ರಾಸ ಉಚ್ಚ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ಸ್ಪಷ್ಟಪಡಿಸಿತು.