ಚಾರಧಾಮ್ ಮತ್ತು ೫೧ ದೇವಸ್ಥಾನಗಳ ಸರಕಾರಿಕರಣ ಯೋಗ್ಯವೇ ಆಗಿದೆ ! – ಉತ್ತರಾಖಂಡದಲ್ಲಿ ಬಿಜೆಪಿ ಸರಕಾರದಿಂದ ಉಚ್ಚ ನ್ಯಾಯಾಲಯದಲ್ಲಿ ಪ್ರತಿಜ್ಞಾಪತ್ರ
ಚಾರಧಾಮ್ ಮತ್ತು ೫೧ ದೇವಸ್ಥಾನಗಳ ಸರಕಾರಿಕರಣ ಯೋಗ್ಯವೇ ಆಗಿದೆ ಎಂದು ಉತ್ತರಾಖಂಡದ ಭಾಜಪ ಸರಕಾರವು ಉತ್ತರಾಖಂಡ ಉಚ್ಚ ನ್ಯಾಯಾಲಯದಲ್ಲಿ ಪ್ರತಿಜ್ಞಾಪತ್ರ ಸಲ್ಲಿಸಿದೆ. ಭಾಜಪದ ಹಿರಿಯ ನಾಯಕ ಹಾಗೂ ರಾಜ್ಯಸಭೆಯ ಸಂಸದರಾದ ಡಾ. ಸುಬ್ರಮಣಿಯನ್ ಸ್ವಾಮಿಯವರು ಈ ಸರಕಾರಿಕರಣದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯ ಬಗ್ಗೆ ನ್ಯಾಯಾಲಯವು ಸರಕಾರದ ಬಳಿ ತಮ್ಮ ಅಭಿಪ್ರಾಯವ ಕೋರಿತ್ತು.