ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ೪ ಲಕ್ಷ ರೂಪಾಯಿಗಳಷ್ಟು ಪರಿಹಾರವನ್ನು ನೀಡಲು ಸಾಧ್ಯವಾಗುವುದಿಲ್ಲ ! – ಕೇಂದ್ರ ಸರಕಾರ
ಕೊರೊನಾದಿಂದ ಮೃತ ಪಟ್ಟ ವ್ಯಕ್ತಿಯ ಕುಟುಂಬಗಳಿಗೆ ೪ ಲಕ್ಷ ರೂಪಾಯಿಗಳ ನಷ್ಟಪರಿಹಾರವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರವು ಸರ್ವೋಚ್ಚನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಕೋರಿ ಸರ್ವೋಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ಮೇಲೆ ಕೇಂದ್ರ ಸರಕಾರದ ಪರವಾಗಿ ಪ್ರತಿಜ್ಞಾಪತ್ರ ಸಲ್ಲಿಸಲಾಯಿತು.