ಉತ್ತರ ಭಾರತದಲ್ಲಿ ಬಿರುಗಾಳಿ ಸಹಿತ ಮಳೆ: ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ
೨೦ ಮತ್ತು ೨೧ ಮಾರ್ಚ್ ರಂದು ಹವಾಮಾನ ಇಲಾಖೆಯು ರಾಜಧಾನಿ ದೆಹಲಿಯಲ್ಲಿ ಹಗುರ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮಪಾತದ ಎಚ್ಚರಿಕೆ ನೀಡಲಾಗಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ಭಾರತದ ರಾಜ್ಯಗಳಲ್ಲೂ ಬಿರುಗಾಳಿಯ ಎಚ್ಚರಿಕೆ ನೀಡಲಾಗಿದೆ.