ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಏಷ್ಯಾದ ಶ್ರೇಷ್ಠ ನಾಯಕ ಪ್ರಶಸ್ತಿ

ಪದ್ಮವಿಭೂಷಣ, ಕರ್ನಾಟಕ ರತ್ನ ಪುರಸ್ಕೃತರಾದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಏಷ್ಯಾದ ಶ್ರೇಷ್ಠ ನಾಯಕ’ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಡಾ. ಹೆಗ್ಗಡೆಯವರ ಮುಂದಾಳತ್ವದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ‘ಏಷ್ಯಾದ ಹೆಮ್ಮೆ’ (ಪ್ರೈಡ್ ಆಫ್ ಏಷ್ಯಾ) ಪ್ರಶಸ್ತಿ ಲಭಿಸಿದೆ