ಮಥುರೆಯ ಶ್ರೀಕೃಷ್ಣಜನ್ಮಭೂಮಿಯಲ್ಲಿಯೂ ಸಮೀಕ್ಷೆ ಮತ್ತು ಚಿತ್ರೀಕರಣಕ್ಕೆ ನ್ಯಾಯಾಲಯದಲ್ಲಿ ಬೇಡಿಕೆ
ಕಾಶಿಯ ಜ್ಞಾನವಾಪಿ ಮಸೀದಿಯಂತೆಯೇ ಮಥುರೆಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ಮತ್ತು ಚಿತ್ರೀಕರಣವನ್ನೂ ಮಾಡಬೇಕು ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಕುರಿತು ಎಲ್ಲಾ ದಾಖಲೆಗಳನ್ನು ಸಾದರಪಡಿಸಲಾಗಿದೆ. ಈ ಅರ್ಜಿಯನ್ನು ನ್ಯಾಯವಾದಿ ಮಹೇಂದ್ರ ಪ್ರತಾಪರವರು ಸಲ್ಲಿಸಿದ್ದಾರೆ.