ಚೈತ್ರ ಶುಕ್ಲ ಪಕ್ಷ ಪಾಡ್ಯದಂದು ವರ್ಷಾರಂಭ ಮಾಡುವುದರ ಹಿಂದಿನ ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು

ಜ್ಯೋತಿಷ್ಯಶಾಸ್ತ್ರಾನುಸಾರ ಪಾಡ್ಯದ ಸಮಯದಲ್ಲಿ ಸೂರ್ಯನು ವಸಂತ-ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವ ವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ.

ಯುಗಾದಿಯಂದು ಶ್ರೀ ಸರಸ್ವತಿ ದೇವಿಯ ಪೂಜೆ ಮಾಡುವ ಮಹತ್ವ

ಈ ದಿನ ಶ್ರೀ ಸರಸ್ವತಿತತ್ತ್ವವು ಪೃಥ್ವಿಯ ಮೇಲೆ ಇತರ ದಿನದ ತುಲನೆಯಲ್ಲಿ ಶೇ. ೩೦ ರಷ್ಟು ಹೆಚ್ಚು ಬರುತ್ತದೆ. ಈ ದಿನ ಅನೇಕರು ವಿದ್ಯೆ ಸಂಪಾದನೆಯ ಶುಭಕಾರ್ಯವನ್ನು ಪ್ರಾರಂಭಿಸುತ್ತಾರೆ. ಇದರಿಂದ ಈ ದಿನ ದೇವಿ ಮತ್ತು ಯಂತ್ರದ ಪೂಜೆ ಹಾಗೂ ಉಪಾಸನೆ ಮಾಡುತ್ತಾರೆ

ಭಾರತೀಯ ಸಂಸ್ಕೃತಿಯಂತೆ ಜನವರಿ ಒಂದಲ್ಲ ಯುಗಾದಿಯೇ ಹೊಸ ವರ್ಷ !

ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವ ಕಾರಣವೂ ಇಲ್ಲ. ತದ್ವಿರುದ್ಧ ಚೈತ್ರ ಶುಕ್ಲ ಪಾಡ್ಯದಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸ ವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ.