ಪ್ರಶಂಸನೀಯ ನಿರ್ಣಯ !

ಮುಖ್ಯಮಂತ್ರಿಗಳಾದ ನಂತರ ಯೋಗಿ ಆದಿತ್ಯನಾಥರ ಆಡಳಿತವು ಯಾವಾಗಲೂ ಕಠಿಣವಾದ ನಿರ್ಧಾರಗಳನ್ನು ಕೈಗೊಂಡಿದೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗುವ ಮೊದಲು ಅರಾಜಕತೆ ಪರಿಸ್ಥಿತಿ ಇತ್ತು. ಹತ್ಯೆ, ಅಪಹರಣ, ಲವ್ ಜಿಹಾದ್, ಹಿಂದೂ-ಮುಸಲ್ಮಾನರಲ್ಲಿ ಗಲಭೆಗಳು ಅಲ್ಲಿ ಯಾವಾಗಲೂ ಇದ್ದವು.

ಯೋಗಿ ಆದಿತ್ಯನಾಥರ ಕಠಿಣ ಪರಿಶ್ರಮದಿಂದಾಗಿ ಉತ್ತರಪ್ರದೇಶದಲ್ಲಿ ಕಾನೂನಿನ ರಾಜ್ಯ ! – ಪ್ರಧಾನಿ ಮೋದಿಯವರಿಂದ ಮೆಚ್ಚುಗೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಉತ್ತರಪ್ರದೇಶಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಆದ್ದರಿಂದ ಇಂದು ಉತ್ತರಪ್ರದೇಶದಲ್ಲಿ ಕಾನೂನಿನ ರಾಜ್ಯವಿದೆ, ಎಂಬ ಪದಗಳಲ್ಲಿ ಪ್ರಧಾನಿ ಮೋದಿಯವರು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರನ್ನು ಶ್ಲಾಘಿಸಿದ್ದಾರೆ.

ಹೆಚ್ಚುತ್ತಿರುವ ಜನಸಂಖ್ಯೆಯು ವಿಕಾಸಕ್ಕೆ ಮಾರಕ ! – ಯೋಗಿ ಆದಿತ್ಯನಾಥ

ಸ್ವಾತಂತ್ರ್ಯನಂತರದ ೭೪ ವರ್ಷಗಳಲ್ಲಿ ಎಲ್ಲಾ ಪಕ್ಷಗಳ ರಾಜಕಾರಣಿಗಳು ಈ ಬಗ್ಗೆ ಯಾವುದೇ ರೀತಿಯಲ್ಲಿ ಪ್ರಯತ್ನಿಸದ ಕಾರಣ ಇಂದು ದೇಶವು ಜನಸಂಖ್ಯಾಸ್ಫೋಟದ ತುತ್ತತುದಿಯಲ್ಲಿ ನಿಂತಿದೆ. ಈಗ ಜನಸಂಖ್ಯೆಯ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸಿದರೆ ಸ್ವಲ್ಪವಾದರೂ ಪರಿಣಾಮವಾಗಬಹುದೆಂದು ಅಪೇಕ್ಷಿಸಬಹುದು !